ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದ 6 ಆಸ್ತಿಗಳು ಹರಾಜು

ಮುಂಬೈ: ಕೇಂದ್ರ ಸರ್ಕಾರದ ಸೂಚನೆಯಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದ ಏಳು ಆಸ್ತಿಗಳ ಪೈಕಿ 6 ಆಸ್ತಿಗಳನ್ನು ಮಹಾರಾಷ್ಟ್ರ ಸರ್ಕಾರ ಹರಾಜು ಹಾಕಿದೆ. ದಿ ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್ ಮ್ಯಾನಿಪುಲೇಟರ್ಸ್ ಆ?ಯಕ್ಟ್ನ ಪ್ರಾಧಿಕಾರಗಳು ದಾವೂದ್ ಇಬ್ರಾಹಿಂನ ಆಸ್ತಿಗಳನ್ನು ಹರಾಜು ಹಾಕಲಾಯ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ಹರಾಜು ಪ್ರಕ್ರಿಯೆ ನಡೆದಿದ್ದು, ಹತ್ತಾರು ಉದ್ಯಮಿಗಳು ಪಾಲ್ಗೊಂಡಿದ್ದರು.
ಈ ಮೊದಲು ರತ್ನಗಿರಿ ಜಿಲ್ಲೆಯ ಲೋಟ್ ಹಾಗೂ ಖೇಡ್ನ ಆಸ್ತಿ ಹಾಗೂ ಬಂಗಲೆಯನ್ನು ಹರಾಜು ಹಾಕಲು ಆದೇಶಿಸಲಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಹರಾಜು ಹಾಕುವ ಪ್ರಕ್ರಿಯೆ ವಿಳಂಬವಾಗಿತ್ತು.
ಭಾರತಕ್ಕೆ ಬೇಕಾಗಿರುವ ದಾವೂದ್ ಇಬ್ರಾಹಿಂ ನಮ್ಮ ದೇಶದ ಪ್ರಜೆಯಲ್ಲ ಎಂದು ಡೊಮಿನಿಕಾ ಸರ್ಕಾರ ಕೆಲವು ತಿಂಗಳ ಹಿಂದೆ ಸ್ಪಷ್ಟನೆ ನೀಡಿತ್ತು. ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಅವಿತುಕೊಂಡಿರುವ ಬಗ್ಗೆಯೂ ಕೂಡ ಸಂಶಯ ವ್ಯಕ್ತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ