ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಕಳೆದವಾರ ಅರೆಸ್ಟ್ ಆಗಿರುವ ಬೆಳಗ್ಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೇ ಹೈಕೋರ್ಟ್ ನಿರಕಾರಿಸಿತ್ತು. ಇದಾದ ಬೆನ್ನಲ್ಲೇ ಅರ್ನಬ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್ ಗೋಸ್ವಾಮಿ ಮೇಲಿದೆ. ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು.
ಈ ಪ್ರಕರಣದ ವಿಚಾರವಾಗಿ ಕಳೆದ ವಾರ ಅರ್ನಬ್ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿ ಎಂದು ಅರ್ನಬ್ ಮನವಿ ಮಾಡಿದ್ದರು. ಆದರೆ, ಈ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ಕೆಳ ಹಂತದ ಕೋಟ್ರ್ಗೆ ತೆರಳಿ ಜಾಮೀನು ಕೋರಬಹುದು ಎಂದು ಹೇಳಿತ್ತು.