ಕೇಂದ್ರದಿಂದ ಮತ್ತಷ್ಟು ಪರಿಹಾರ ಸಿಗುವ ನಿರೀಕ್ಷೆ: ಸಿಎಂ ನೆರೆ ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ವಿತರಿಸಲು ಕ್ರಮ

ಬೆಂಗಳೂರು: ಸದ್ಯ ಕೇಂದ್ರ ಸರ್ಕಾರದಿಂದ 577 ಕೋಟಿ ರೂ. ಪರಿಹಾರದ ಹಣ ಬಂದಿದ್ದು, ಇದನ್ನು ಶೀಘ್ರದಲ್ಲಿ ಪ್ರವಾಹ ಸಂತ್ರಸ್ತರಿಗೆ ವಿತರಿಸುವ ಕಾರ್ಯ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಪಶ್ಚಿಮ ಭಾಗದಲ್ಲಿರುವ ನೆಹರು ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರುರವರ 131ನೇ ಜನ್ಮ ದಿನಾಚರಣೆ ಪ್ರಯುಕ್ತ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಈಗ ಬಂದಿರುವುದನ್ನು ಎನ್‍ಡಿಆರ್‍ಎಫ್ ಪರಿಹಾರದ ಮೊದಲ ಕಂತು ಎಂದು ಭಾವಿಸಿದ್ದೇವೆ. ಮತ್ತಷ್ಟು ಪರಿಹಾರ ದೊರೆಯುವ ನಿರೀಕ್ಷೆಯಿದೆ. ಇನ್ನೂ ಹೆಚ್ಚಿನ ಪರಿಹಾರ ಪಡೆಯಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ಈ ಬಾರಿ ಯಪಿಎಸ್‍ಸಿ ಹಾಗೂ ಕೆಪಿಎಸ್‍ಸಿ ಪರೀಕ್ಷೆಗಳು ಒಟ್ಟೊಟ್ಟಿಗೆ ನಡೆಯುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಅಕಾರಿಗಳೊಂದಿಗೆ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ