ಶೇ.80 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲ್ಲುವ ವಿಶ್ವಾಸ: ಕಟೀಲು ಗ್ರಾಪಂ ಚುನಾವಣೆಗೆ ಪಂಚರತ್ನ ಸಮಿತಿ, ಪಂಚಸೂತ್ರ ಯೋಜನೆ

The flags are a lotus

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಸನ್ನದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದರು.
ಬಿಜೆಪಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮ ಸ್ವರಾಜ್ ಸಮಾವೇಶಗಳನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳುವ ಕುರಿತು ಪೂರ್ವ ತಯಾರಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳ ಸಂದರ್ಭದಲ್ಲೇ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ ಪೇಜ್ ಪ್ರಮುಖರನ್ನು ನೇಮಿಸಲಾಗಿತ್ತು. ಈಗ ಹೆಚ್ಚುವರಿಯಾಗಿ ಪಂಚರತ್ನ ಸಮಿತಿ ಮತ್ತು ಪಂಚಸೂತ್ರ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದರು.
ಪಂಚಸೂತ್ರದ ಅಡಿಯಲ್ಲಿ ವಾರ್ ರೂಂಗಳು ಕಾರ್ಯ ನಿರ್ವಹಿಸಲಿವೆ. ಇದಲ್ಲದೆ ಕುಟುಂಬ ಮಿಲನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಇವೆಲ್ಲವುಗಳ ನೆರವಿನಿಂದ ಪಕ್ಷದ ಬೆಂಬಲಿತರು ಶೇ.80 ಕ್ಕೂ ಹೆಚ್ಚು ಪಂಚಾಯತ್‍ಗಳಲ್ಲಿ ಬಿಜೆಪಿ ಅಕಾರ ಹಿಡಿಯಲಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಜಾತಿಯವರಿಗೆ ಸ್ರ್ವಸಲು ಬಿಜೆಪಿ ಆದ್ಯತೆ ನೀಡುತ್ತಿದೆ. ಪಂಚಾಯಿತಿ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಕಾರಿಗಳ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತರು ನಾಯಕತ್ವ ವಹಿಸುವಂತಾಗಬೇಕು. ಇದಕ್ಕಾಗಿ ಬಿಜೆಪಿ ವತಿಯಿಂದ ಗ್ರಾಮ ಸ್ವರಾಜ್ ಸಮಾವೇಶಗಳನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು. ಪ್ರತಿ ಜಿಲ್ಲೆಗೆ ಎರಡು ಸಮಾವೇಶಗಳನ್ನು ನಡೆಸಲಾಗುವುದು ಎಂದರು.
ಕೋವಿಡ್ ಇರುವ ಕಾರಣಕ್ಕಾಗಿ ನಿಯಮ ಉಲ್ಲಂಘನೆ ಆಗದಂತೆ ಮತ್ತು ಕಾನೂನಿಗೆ ಧಕ್ಕೆ ಆಗದ ರೀತಿಯಲ್ಲಿ ಈ ಸಮಾವೇಶಗಳನ್ನು ಏರ್ಪಡಿಸಲಾಗುವುದು. ಇದೇ ತಿಂಗಳ 27ರಂದು ಆರಂಭಗೊಂಡು ಡಿ.3 ವರಿಗೆ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಮತು ್ತ ರಾಜ್ಯ ಸರ್ಕಾರಗಳ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ತಿಳಿಸಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ