ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಟೀಕೆ ಸಿದ್ದರಾಮಯ್ಯ ರಾಜಕೀಯ ಸರ್ವಜ್ಞ !

ಚಿಕ್ಕಬಳ್ಳಾಪುರ: ಕಟೀಲ್‍ಗೆ ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ರಾಜಕೀಯ ಸರ್ವಜ್ಞ, ಅಂತಹ ಮಹಾನ್ ಜ್ಞಾನಿ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ಟೀಕೆ ಮಾಡುವುದು ಎಂದರೆ ತಮ್ಮಿಷ್ಟಕ್ಕೆ ಬಂದ ಹಾಗೆ ಮಾತನಾಡುವುದು ಸರಿ ಅಲ್ಲ ಎಂದರು.
ಡಿಕೆಶಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಸಿದಂತೆ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿರುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್ ಬಳಿ ಸಿ.ಡಿ. ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಜನರನ್ನು ದಿಕ್ಕು ತಪ್ಪಿಸಬೇಡಿ:
ರಾಜಕೀಯಕ್ಕಾಗಿ ಜನರನ್ನು ದಿಕ್ಕು ತಪ್ಪಿಸುವ ರೀತಿಯಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡಬಾರದು, ಇದು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಎನ್ನುವ ಪದದ ಕುರಿತಾಗಿ ಮಾತನಾಡಿ, ಬಿಜೆಪಿ ಬಿ ಫಾರಂ ಪಡೆದು ಪಕ್ಷಕ್ಕೆ ಬಂದವರು. ಬಿಜೆಪಿ ಸರ್ಕಾರ ರಚನೆಗೆ ಸಹಕಾರ ಕೊಟ್ಟ ಪ್ರತಿಯೊಬ್ಬರಿಗೂ ಕೊಟ್ಟ ಮಾತನ್ನು ಉಳಿಸಿಕೊಂಡು ನ್ಯಾಯ ಕೊಡುತ್ತಿದ್ದೇವೆಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ