ಅಕಾರಿಗಳಿಗೆ ಸಚಿವ ಸಿ.ಟಿ.ರವಿ ಸೂಚನೆ ಅಂಬೇಡ್ಕರರ ಭಾಷಣ, ಬರಹ ಮರುಮುದ್ರಣ

ಬೆಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಒಳಗೊಂಡ ಸಂವಿಧಾನ ರಚನಾ ಸಮಿತಿ ನಡಾವಳಿಗಳ 22 ಸಂಪುಟಗಳನ್ನು ಮರುಮುದ್ರಣ ಮಾಡುವಂತೆ ಕನ್ನಡ ಮತ್ತು ಸಂಸ್ಕ ಇಲಾಖೆ ಸಚಿವ ಸಿ.ಟಿ.ರವಿ ಅಕಾರಿಗಳಿಗೆ ಸೂಚಿಸಿದರು.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಕಾಡೆಮಿ, ಪ್ರಾಕಾರ ಹಾಗೂ ಇಲಾಖೆ ಅಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಒಳಗೊಂಡ ಸಂವಿಧಾನ ರಚನಾ ಸಮಿತಿ ನಡಾವಳಿಗಳ 22 ಸಂಪುಟಗಳನ್ನು ಮರುಮುದ್ರಣ ಮಾಡಲು ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಸಿ.ಟಿ.ರವಿ ಅಕಾರಿಗಳಿಗೆ ಸೂಚಿಸಿದರು. ಕುವೆಂಪು ಭಾಷಾ ಭಾರತಿ ವತಿಯಿಂದ 22 ಸಂಪುಟಗಳನ್ನು ಮರುಮುದ್ರಣ ಮಾಡಬೇಕು. ಪ್ರತಿ ಸಂಪುಟವು ಒಂದು ಸಾವಿರ ಪುಟಗಳನ್ನು ಒಳಗೊಂಡಿದ್ದು, ಆದಷ್ಟು ಶೀಘ್ರ ಮರುಮುದ್ರಣ ಮಾಡುವಂತೆ ಅಕಾರಿಗಳಿಗೆ ನಿದೇರ್ಶನ ನೀಡಿದರು.
ಅಕಾಡೆಮಿಗಳು ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ
ಕೊರೋನಾದಂತಹ ಸಂದರ್ಭದಲ್ಲೂ ಪ್ರಾಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಕಲಾವಿದರಿಗೆ ಪೂರಕವಾದ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನನ್ನ ನಿರೀಕ್ಷೆಗೆ ತಕ್ಕಂತೆ ಅಕಾಡೆಮಿಗಳು ಕೆಲಸ ಮಾಡುತ್ತಿಲ್ಲ.
ಸರ್ಕಾರ ಅಕಾಡೆಮಿ ಮತ್ತು ಪ್ರಾಕಾರಕ್ಕೆ ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಆರ್ಥಿಕ ನೆರವು ನೀಡಿದೆ. ವರ್ಷಪೂರ್ತಿ ಸೃಜನಾತ್ಮಕ ಕಾರ್ಯಕ್ರಮಗಳು ನಡೆಯಬೇಕೆಂದು ಸೂಚಿಸಲಾಗಿತ್ತು. ಬೆರೆಳೆಣಿಕೆಯಷ್ಟು ಅಕಾಡೆಮಿಗಳು ಮಾತ್ರ ಸಕ್ರಿಯವಾಗಿವೆ. ಉಳಿದ ಅಕಾಡೆಮಿ ಮತ್ತು ಪ್ರಾಕಾರಗಳು ಇನ್ನು ಚುರುಕುಗೊಳ್ಳಬೇಕಿದೆ ಎಂದರು.
ವಿವಿಧ ಸಾಹಿತ್ಯ ಅಕಾಡೆಮಿಗಳ ಅಧ್ಯಕ್ಷರು ,ಇಲಾಖೆಯ ಅಕಾರಿಗಳು, ಅಕಾಡೆಮಿ ಹಾಗೂ ಪ್ರಾಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ