ವಿತರಣಾ ವ್ಯವಸ್ಥೆಯಲ್ಲಿ ಕರ್ನಾಟಕದ್ದೂ ಇದೆ ಪಾಲು ಒಂದು ಪಡಿತರ, ಒಂಬತ್ತು ರಾಜ್ಯ ಸಾಧನೆ

ಹೊಸದಿಲ್ಲಿ: ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳು ತಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಸಂಪೂರ್ಣ ಸುಧಾರಣೆ ತಂದಿದ್ದು, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿವೆ . ಈ ಕಾರಣ ರಾಜ್ಯಗಳಿಗೆ ಹೆಚ್ಚುವರಿ 23,523 ಕೋಟಿ ರೂ. ಸಾಲ ಪಡೆಯಲು ಕೇಂದ್ರ ವಿತ್ತ ಸಚಿವಾಲಯ ಅವಕಾಶ ನೀಡಿದ್ದು, ಇದರಿಂದ ಆರ್ಥಿಕ ಸಂಪನ್ಮೂಲಗಳ ಕ್ರೋಡೀಕರಣ ಸಾಧ್ಯವಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಹರ್ಯಾಣ, ಕೇರಳ, ತೆಲಂಗಾಣ, ಉತ್ತರಪ್ರದೇಶ,ಗುಜರಾತ್ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ 9 ರಾಜ್ಯಗಳಾಗಿವೆ.
ಸೋಂಕು ಪರಿಸ್ಥಿತಿಯಲ್ಲಿ ರಾಜ್ಯಗಳನ್ನು ಆರ್ಥಿಕವಾಗಿ ಶಕ್ತಗೊಳಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು.ರಾಜ್ಯ ಒಟ್ಟು ಉತ್ಪನ್ನದ (ಜಿಎಸ್‍ಡಿಪಿ) ಶೇ.2ರಷ್ಟು ಸಾಲ ಪಡೆಯಲು ಅನುಮೋದನೆ ನೀಡಲಾಗಿತ್ತು. ಈ ಪೈಕಿ ಶೇ.0.25ರಷ್ಟು ಅನುದಾನವನ್ನು ಯೋಜನೆ ಜಾರಿಗೊಳಿಸಲು ರಾಜ್ಯಗಳು ಬಳಸಿದ್ದವು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಫಲಾನುಭವಿಗಳು ದೇಶದ ಯಾವುದೇ ರಾಜ್ಯದಲ್ಲಿ ಸಬ್ಸಿಡಿ ದರದಲ್ಲಿ ಪಡಿತರ ಪಡೆಯಬಹುದಾದ ಸೌಲಭ್ಯವನ್ನು ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆ ಒದಗಿಸುತ್ತದೆ. ಇದರಿಂದ ಲಕ್ಷಂತಾರ ವಲಸೆ ಕಾರ್ಮಿಕರು, ಬಡವರಿಗೆ ಅನುಕೂಲಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ