ಇಂದು ಒಪಿಡಿ ಬಂದ್

ಬೆಂಗಳೂರು: ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮ ಅಸೂಚನೆ ವಿರೋಸಿ ಶುಕ್ರವಾರ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಹೊರ ರೋಗಿ ವಿಭಾಗವನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಯಾವುದೇ ವ್ಯತ್ಯಯಗಳಾಗದಂತೆ ಆರೋಗ್ಯ ಇಲಾಖೆ ರಾಜ್ಯದ ಜಿಲ್ಲಾ ಹಾಗೂ ವೈದ್ಯಕೀಯ ವಿದ್ಯಾಲಯಗಳಿಗೆ ಸೂಚಿಸಿದೆ.
ಸ್ನಾತಕೋತ್ತರ ವ್ಯಾಸಂಗ ಮಾಡಿರುವ ಆಯುಷ್ ವೈದ್ಯರು 39 ಸಾಮಾನ್ಯ ಹಾಗೂ 19 ಕಿವಿ, ಮೂಗು, ಗಂಟಲು, ಕಣ್ಣು, ಶಿರ ಮತ್ತು ದಂತ ವೈದ್ಯ ಸೇವೆಗಳ ಶಸ್ತ್ರ ಚಿಕಿತ್ಸೆಗಳನ್ನು ನಿರ್ವಹಿಸಬಹುದೆಂದು ಅಸೂಚನೆ ಹೊರಡಿಸಿದ್ದು, ಇದನ್ನು ವಿರೋಸಿ ಭಾರತೀಯ ವೈದ್ಯ ಸಂಘದ ಕರ್ನಾಟಕ ರಾಜ್ಯ ಶಾಖೆ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ತುರ್ತು ಹಾಗೂ ಕೋವಿಡ್-19 ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದೆ.
ಹೀಗಾಗಿ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ವಿಭಾಗೀಯ ಜಂಟಿ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಕಾರಿಗಳು, ಜಿಲ್ಲಾ ಆಸ್ಪತ್ರೆಗಳು ಹಾಗೂ ವೈದ್ಯಕೀಯ ವಿದ್ಯಾಲಯಗಳು ಹಾಗೂ ಶಸ್ತ್ರ ಚಿಕಿತ್ಸೆ ತಜ್ಞರಿಗೆ ತಮ್ಮ ಅೀನದಲ್ಲಿನ ಅಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಸೇರಿದಂತೆ  ಆರೋಗ್ಯ ಸೇವೆಗಳು ಯಾವುದೇ ವ್ಯತ್ಯಯವಿಲ್ಲದಂತೆ ಎಂದಿನಂತೆ ಕಾರ್ಯನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದೆ. ಅಲ್ಲದೇ ಮುಷ್ಕರದ ಅವಯಲ್ಲಿ ವೈದ್ಯರಿಗೆ ಯಾವುದೇ ರಜೆಯನ್ನು ಮಂಜೂರು ಮಾಡದಿರಲು ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸೂಚಿಸಿದ್ದಾರೆ.
ಏನೇನು ಇರುತ್ತವೆ ?
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ಮತ್ತು ಒಳರೋಗಿ ವಿಭಾಗ ತೆರೆಯಲಿವೆ. ಔಷಧಾಲಯಗಳು ಕೂಡ ಎಂದಿನಂತೆ ಸೇವೆ ಸಲ್ಲಿಸಲಿದ್ದು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಮಾತ್ರ ಬಂದ್ ಆಗಿರಲಿವೆ. ಕೋವಿಡ್, ತುರ್ತು ಚಿಕಿತ್ಸೆ, ತೀವ್ರ ಅನಾರೋಗ್ಯಕ್ಕೆ ಚಿಕಿತ್ಸೆ ಸಿಗಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ