ರೈತ ಪರ ಸತ್ವಯುತ ಕಾನೂನು ಕುರಿತು ಅರಿವು ಮೂಡಿಸಬೇಕಿದೆ ಎಪಿಎಂಸಿ ಕಾಯ್ದೆ ತಿದ್ದುಪಡಿ ನೀತಿ ಬದಲಿಸಲ್ಲ

ಮೈಸೂರು: ಎಪಿಎಂಸಿ ಕಾಯ್ದೆಯ ತಿದ್ದುಪಡಿ ನೀತಿಯನ್ನು ಬದಲಾಯಿಸುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರೈತರಿಗೆ ಅನುಕೂಲವನ್ನುಂಟು ಮಾಡುವ ಈ ಕಾಯ್ದೆಯಿಂದ ಲಾಭವೇ ವಿನಾ ಹಾನಿಯಿಲ್ಲ. ರೈತ ತಾನು ಬೆಳೆದ ಬೆಳೆಯನ್ನು ರಾಜ್ಯದ ಯಾವುದೇ ಮೂಲೆಯಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು. ತನ್ನ ಬೆಳೆಗೆ ರೈತನೇ ದರ ನಿಗದಿ ಮಾಡಿಕೊಳ್ಳಬಹುದು., ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ಈಗಲೂ ಇದೆ, ಮುಂದೂ ಇರುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲ ಕಡೆ ಕೋಡಿಹಳ್ಳಿ ಮೂಗುತೂರಿಸಬಾರದು:
ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತಪರ ಹೋರಾಟವನ್ನು ಮಾಡಿಕೊಂಡಿರಲಿ. ಅದುಬಿಟ್ಟು ಎಲ್ಲ ಕಡೆ ಮೂಗುತೂರಿಸಬಾರದು. ಅವರು ಯಾವ ನಾಟಕವಾಡಿದರೂ ಜನಕ್ಕೆ ಅರ್ಥವಾಗುತ್ತದೆ. ಅವರು ತಮ್ಮ ನಾಟಕವನ್ನು ಬಿಟ್ಟು 9 ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುವುದಕ್ಕೆ ಅಭಿನಂದನೆ ಸೂಚಿಸಬೇಕಿತ್ತು. ಅದು ಬಿಟ್ಟು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಹೋರಾಟ ಮಾಡುವಂತೆ ಮಾಡುವುದು ಸರಿಯೇ? ಎಲ್ಲ ಕಡೆಯೂ ಕೋಡಿಹಳ್ಳಿ ಚಂದ್ರಶೇಖರ್ ಅವರು ಕಾಂಟ್ರ್ಯಾಕ್ಟ್ ತೆಗೆದುಕೊಂಡಿದ್ದಾರೆಯೇ? ಅವರು ರೈತರ ಪರ ಹೋರಾಟ ಮಾಡಲಿ, ಇಂತಹ ರಾಜಕೀಯ ಬೇಡ ಎಂದು ಕಿಡಿ ಕಾರಿದರು.
ಸೂಸೂತ್ರವಾಗಿ ನಡೆದ ಪಂಚಲಿಂಗ ದರ್ಶನ:
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿರುವ ಪಂಚಲಿಂಗ ದರ್ಶನವು ಸುಸೂತ್ರ ಹಾಗೂ ಸರಾಗವಾಗಿ ಆಯಿತು. ಮುಂಜಾನೆ 4.30ರಿಂದ 5.45ರ ವರೆಗೆ ನಿರ್ವಿಘ್ನವಾಗಿ ನೆರವೇರಿದೆ. ಏಳು ವರ್ಷಕ್ಕೊಮ್ಮೆ ಮಹೋತ್ಸವ ನಡೆಯುತ್ತಿರುವುದರಿಂದ ಭಕ್ತರಿಗೂ ಸಹ ದರ್ಶನಕ್ಕೆ ಅವಕಾಶ ಸಿಗಬೇಕು. ಈಗ ಜಿಲ್ಲಾಡಳಿತ ಹೇರಿರುವ 1500 ಜನರ ನಿರ್ಬಂಧವನ್ನು ಸಡಿಲಿಸಿ ಹಂತ ಹಂತವಾಗಿ ಅನುಮತಿ ನೀಡಿ ಹೆಚ್ಚಿನವರಿಗೆ ಅವಕಾಶ ನೀಡುವಂತೆ ಜಿಲ್ಲಾಕಾರಿ ಹಾಗೂ ಪೊಲೀಸ್ ವರಿಷ್ಠಾಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ