*ಡಿ.25ಕ್ಕೆ 9 ಕೋಟಿ ರೈತರ ಬ್ಯಾಂಕ್ ಖಾತೆಗೆ 18,000 ಕೋಟಿ ರೂ. ವರ್ಗಾವಣೆ ನಾಳೆ 6 ರಾಜ್ಯ ರೈತರ ಜತೆ ಮೋದಿ ಮಾತು

**EDS: VIDEO GRAB** New Delhi: Prime Minister Narendra Modi addresses the farmers of Madhya Pradesh, in New Delhi, Friday, Dec. 18, 2020. (PTI Photo)(PTI18-12-2020_000058B)

ಹೊಸದಿಲ್ಲಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳ ವಿರೋಸಿ ರೈತರ ಪ್ರತಿಭಟನೆ ಮುಂದುವರಿದಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 25ರಂದು 6 ರಾಜ್ಯಗಳ ರೈತರನ್ನು ಉದ್ದೇಶಿಸಿ ಆನ್‍ಲೈನ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಪಿಎಂ-ಕಿಸಾನ್ ಸಮ್ಮಾನ್ ನಿ ಯೋಜನೆ ಅನ್ವಯ 9 ಕೋಟಿ ರೈತರ ಖಾತೆಗೆ 18,000 ಕೋಟಿ ರೂ. ಬಿಡುಗಡೆ ಮಾಡಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಆನ್‍ಲೈನ್ ಕಾರ್ಯಕ್ರಮ ಆರಂಭವಾಗಲಿದ್ದು, ಮೋದಿ ಕೃಷಿ ಕಾಯ್ದೆಗಳ ಕುರಿತಂತೆ ರೈತರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಪಿಎಂ- ಕಿಸಾನ್ ಸೇರಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ರೈತರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಪಿಎಂ ಕಿಸಾನ್ ಸಮ್ಮಾನ್ ನಿ ಅನ್ವಯ ಫಲಾನುಭವಿ ರೈತರ ಖಾತೆಗೆ ಎರಡನೇ ಕಂತಿನ ಹಣವನ್ನು ಮೋದಿ ಬಿಡುಗಡೆಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ