ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟನೆ ಉಳಿದ ಎರಡೂವರೆ ವರ್ಷ ನಾನೇ ಸಿಎಂ

ಬೆಂಗಳೂರು: ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಒಂದೂವರೆ ವರ್ಷದ ನನ್ನ ಆಡಳಿತ ಅವಯಲ್ಲಿ ಒಂದು ದಿವಸವೂ ಇಂತಹ ಯಾವ ವಿಷಯದ ಬಗ್ಗೆ ಗಮನ ಕೊಟ್ಟಿಲ್ಲ. ನಾನಾಯಿತು, ಅಭಿವೃದ್ಧಿ ಕಾರ್ಯವಾಯಿತು ಎಂದು ಅದರ ಕಡೆಗೆ ಮಾತ್ರ ಗಮನ ಕೊಟ್ಟಿದ್ದೇನೆ. ಇದ್ಯಾವುದೂ ನನ್ನ ಮೇಲೆ ಪರಿಣಾಮ ಬೀರಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೂ ಇದೆಲ್ಲದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಇನ್ನು ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ಹೀಗಿರುವಾಗ ನಾಯಕತ್ವದ ಪ್ರಶ್ನೆ ಉದ್ಭವಿಸುವುದೇ ಇಲ್ಲ. ನಮ್ಮ ಸಚಿವರು, ಶಾಸಕರು, ರಾಜ್ಯದ ಜನರಲ್ಲೂ ಈ ಬಗ್ಗೆ ಗೊಂದಲ ಇಲ್ಲ. ಗೊಂದಲ ಇರುವುದು ಏನಿದ್ದರೂ ಮಾಧ್ಯಮ ಸ್ನೇಹಿತರಲ್ಲಿ. ತಾವು ಸ್ವಲ್ಪ ಸಹರಿಸಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ಸಿಎಂ ಚಟಾಕಿ ಹಾರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ