ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಕೆಯ ಪ್ರಮಾಣ ಶೇಕಡ 96.49ಕ್ಕೆ ಏರಿಕೆಯಾಗಿದೆ. ಕಳೆದ 24 ತಾಸಿನಲ್ಲಿ 18 ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 1 ಕೋಟಿ ಒಂದು ಲಕ್ಷಕ್ಕೆ ಏರಿದೆ. ಭಾರತದಲ್ಲಿನ ಚೇತರಿಕೆ ಪ್ರಮಾಣ ವಿಶ್ವದಲ್ಲೇ ಅತ್ಯಧಿಕವಾಗಿದೆ. ಒಟ್ಟು ದೃಢಪಟ್ಟ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇಕಡ 2.07ರಷ್ಟಿದ್ದು, ಸದ್ಯ ಈ ಪ್ರಕರಣಗಳ ಸಂಖ್ಯೆ 2 ಲಕ್ಷದ 16 ಸಾವಿರದಷ್ಟಿದೆ. ಕಳೆದ 24 ತಾಸಿನಲ್ಲಿ 12 ಸಾವಿರದ 584 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ ಒಂದು ಕೋಟಿ 4 ಲಕ್ಷ ದಾಟಿದೆ. ಭಾರತದಲ್ಲಿ ಸೋಂಕಿನಿಂದ ಸಾವಿನ ಪ್ರಮಾಣ ಶೇಕಡ 1.44ರಷ್ಟಿದ್ದು, ಇದು ಜಾಗತಿಕವಾಗಿ ಕನಿಷ್ಠ ಪ್ರಮಾಣವಾಗಿದೆ. ಕಳೆದ 24 ತಾಸಿನಲ್ಲಿ 167 ಮಂದಿ ಸೋಂಕಿನಿಂದ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ ಒಂದು ಲಕ್ಷ 51 ಸಾವಿರದ 327ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ತಾಸಿನಲ್ಲಿ 8 ಲಕ್ಷದ 97 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರೊಂದಿಗೆ ಈವರೆಗೆ ಪರೀಕ್ಷಿಸಲಾದ ಒಟ್ಟು ಕೋವಿಡ್ ಮಾದರಿಗಳ ಸಂಖ್ಯೆ 18 ಕೋಟಿ 26 ಲಕ್ಷಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
Related Articles
ಕೋವಿಡ್ ಕಾರಣಕ್ಕೆ ವಿಳಂಬ ಆಯ್ತು, ಪೌರತ್ವ ಕಾಯ್ದೆ ಶೀಘ್ರದಲ್ಲೇ ಅನುಷ್ಠಾನ: ಜೆ.ಪಿ. ನಡ್ಡಾ
October 20, 2020
Varta Mitra News - SP
ರಾಜ್ಯ, ಆರೋಗ್ಯ
Comments Off on ಕೋವಿಡ್ ಕಾರಣಕ್ಕೆ ವಿಳಂಬ ಆಯ್ತು, ಪೌರತ್ವ ಕಾಯ್ದೆ ಶೀಘ್ರದಲ್ಲೇ ಅನುಷ್ಠಾನ: ಜೆ.ಪಿ. ನಡ್ಡಾ
Seen By: 59 ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶೀಘ್ರದಲ್ಲೇ ದೇಶಾದ್ಯಂತ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಉತ್ತರ [more]
ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ : ಡಾ.ಸಿ.ಎನ್.ಅಶ್ವತ್ಥನಾರಾಯಣ
July 14, 2021
Varta Mitra News - SP
ರಾಜ್ಯ
Comments Off on ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ : ಡಾ.ಸಿ.ಎನ್.ಅಶ್ವತ್ಥನಾರಾಯಣ
Seen By: 56 ಬೆಂಗಳೂರು, ಜು.14- ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ [more]
ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೋದಿ ಸಲಹೆ : ಸೂಕ್ಷ್ಮ ಕಂಟೇನ್ಮೆಂಟ್ ವಲಯಗಳಿಗೆ ಒತ್ತು ನೀಡಿ
July 14, 2021
Varta Mitra News - SP
ರಾಷ್ಟ್ರೀಯ
Comments Off on ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೋದಿ ಸಲಹೆ : ಸೂಕ್ಷ್ಮ ಕಂಟೇನ್ಮೆಂಟ್ ವಲಯಗಳಿಗೆ ಒತ್ತು ನೀಡಿ
Seen By: 48 ಹೊಸದಿಲ್ಲಿ: ಕೊರೋನಾ ನಿಯಂತ್ರಣಕ್ಕೆ ಸೂಕ್ಷ್ಮ ಕಂಟೇನ್ಮೆಂಟ್ ವಲಯಗಳಿಗೆ ಒತ್ತು ನೀಡುವುದು ಉತ್ತಮ ಉಪಾಯ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಈಶಾನ್ಯ ರಾಜ್ಯಗಳ [more]