ಪ್ರತಿದಿನ ಕನಿಷ್ಠ 40ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಸಾಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಪ್ರತಿದಿನ ಕನಿಷ್ಠ 40ಕಿಲೋ ಮೀಟರ್ ರಸ್ತೆ ನಿರ್ಮಾಣ ಮಾಡುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಸಾಧಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಪ್ರತಿದಿನ 30 ಕಿಲೋ ಮೀಟರ್ ರಸ್ತೆ ನಿರ್ಮಾಣ ಗುರಿ ಸಾಧಿಸಿದೆ. ದೇಶದಲ್ಲಿ ಪ್ರತಿದಿನ ರಸ್ತೆ ಅಪಘಾತಗಳಲ್ಲಿ ಸರಾಸರಿ 415 ಜನರು ಮರಣ ಹೊಂದುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರಸ್ತೆಗಳ ಗುಣಮಟ್ಟ ಕಾಪಾಡಲು ಬದ್ಧವಾಗಿದೆ. ರಸ್ತೆಗಳಲ್ಲಿರುವ ಗುಂಡಿ, ಕಂದಕಗಳನ್ನು ಮುಚ್ಚಲು 14 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಜನರ ಪ್ರಯಾಣ ಮತ್ತು ಸಂಚಾರ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು. ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಮಾತನಾಡಿ, ರಸ್ತೆ ಸುರಕ್ಷತೆ ಕೇವಲ ಒಂದು ತಿಂಗಳಿಗೆ ಸೀಮಿತವಾಗದೇ ನಿರಂತರ ಪ್ರಕ್ರಿಯೆಯಾಗಬೇಕು. ದೇಶದ ಆರ್ಥಿಕತೆಯ ಪ್ರಗತಿಗೆ ರಸ್ತೆಗಳು ಜೀವನಾಡಿಗಳಾಗಿವೆ. ರಸ್ತೆಗಳ ಮೂಲ ಸೌಕರ್ಯ ಅಭಿವೃದ್ಧಿಪಡಿಸಿ ರಸ್ತೆ ಸಂಪರ್ಕಗಳ ಸುಧಾರಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ