9 ಭ್ರಷ್ಟ ಅಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಯ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ದಾಖಲಾತಿ ದೊರೆತಿವೆ.

ಬೆಂಗಳೂರು, ಕೋಲಾರ, ಮಂಗಳೂರು, ಬೀದರ್, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಆಪ್ತರ ಮನೆ ಸೇರಿ 40 ಕಡೆ 250ಕ್ಕೂ ಅಧಿಕಾರಿಗಳು ದಾಳಿ ನಡೆಸಿದರು. ಕೆಲವು ಕಡೆ ಪರಿಶೀಲನಾ ಕಾರ್ಯ ಮುಂದುವರಿದಿದೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ವಿಭಾಗದ ಕಾರ್ಯಪಾಲಕ ಅಭಿಯಂತರ ಜಿ.ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯ ಇಇ ಎಸ್ ಕೃಷ್ಣ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯ ಪಿ ಕುಲಕರ್ಣಿ, ಮಾಲೂರು ನಗರ ಯೋಜನಾ ಪ್ರಾಕಾರದ ಸಹಾಯಕ ನಿರ್ದೇಶಕ ಎಚ್.ಕೃಷ್ಣಪ್ಪ, ಸುರೇಶ್ ಮೋಹ್ರೆ ಸೇರಿ 9 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಸ್ವಂತ ಕಟ್ಟಡ, ಐಶಾರಾಮಿ ಕಾರು, ಲಕ್ಷಾಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿವೆ. ಇಷ್ಟಲ್ಲದೇ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

ಕುಲಕರ್ಣಿ ಎಂಬ ಅಧಿಕಾರಿಯು ಐದಾರು ಐಷಾರಾಮಿ ಅಪಾರ್ಟ್ ಮೆಂಟ್ ನಲ್ಲಿ ಫ್ಲಾಟ್ ಹೊಂದಿದ್ದರು. ಕೆಲವನ್ನು ಬಾಡಿಗೆಗೆ ನೀಡಿದ್ದರು. ಮಗನ ಹೆಸರಲ್ಲಿ ಕಂಪನಿ ಕೂಡ ತೆರೆದಿದ್ದರು. ಕೋಟ್ಯಂತರ ರೂ. ಇನ್ಶೂರೆನ್ಸ್ ಕೂಡ ಹೊಂದಿರುವ ದಾಖಲೆ ಸಿಕ್ಕಿವೆ ಎನ್ನಲಾಗುತ್ತಿದೆ.

ಮಾಲೂರು ನಗರ ಯೋಜನಾ ನಿರ್ದೇಶಕ ಎಚ್.ರ್.ಕೃಷ್ಣಪ್ಪ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದ್ದು, ದಾಖಲೆ ಹಾಗೂ ಆಸ್ತಿಪತ್ರಗಳ ಪರಿಶೀಲನೆ ನಡೆಯುತ್ತಿದೆ. ಇವರ ಸ್ವ ಗ್ರಾಮವಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ, ಮಾಲೂರು ಮನೆ ಮತ್ತು ಕಚೇರಿ ಐದು ಕಡೆ ಏಕಕಾಲಕ್ಕೆ ದಾಳಿ ನಡೆದಿದ್ದು, ಅಪಾರ ನಗದು, ಚಿನ್ನಾಭರಣ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ


Fatal error: Allowed memory size of 268435456 bytes exhausted (tried to allocate 8192 bytes) in /home/deploy/projects/kannada.vartamitra.com/wp-includes/wp-db.php on line 1889