ಅಫ್ಘಾನಿಸ್ಥಾನದಲ್ಲಿ ಭಾರತೀಯ ಫೋಟೊ ಜರ್ನಲಿಸ್ಟ್ ಸಾವು

ಕಾಬೂಲ್: ಅಫ್ಘಾನಿಸ್ಥಾನದ ಸೇನೆ ಮತ್ತು ತಾಲಿಬಾನಿಗಳ ನಡುವೆ ಸಂಘರ್ಷ ನಡೆಯುತ್ತಿರುವ ಪ್ರದೇಶಗಳ ಸ್ಥಿತಿಗತಿ ಕುರಿತ ವರದಿ ಮಾಡಲು ತೆರಳಿದ್ದ ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೊ ಜರ್ನಲಿಸ್ಟ್, ರಾಯಿಟರ್ಸ್ ಸುದ್ದಿ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದ ಡ್ಯಾನಿಷ್ ಸಿದ್ದಕಿ (40) ಅವರು ಗುರುವಾರ ರಾತ್ರಿ ಹತ್ಯೆಯಾಗಿದ್ದಾರೆ.

ಕಂದಹಾರ್‍ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ, ಆಫ್ಘನ್ ಸೇನೆ ಮತ್ತು ತಾಲಿಬಾನಿಗಳ ನಡುವೆ ನಡುವಿನ ಭೀಕರ ಕದನದ ದೃಶ್ಯವನ್ನು ಸೆರೆಹಿಡಿಯಲು ಅವರು ತೆರಳಿದ್ದರು ಎಂದು ವರದಿಯಾಗಿದೆ.

ಅಫ್ಘಾನಿಸ್ಥಾನದ ಸ್ಪಿನ್ ಬೋಲ್ಡಾಕ್ ಜಿಲ್ಲೆಯನ್ನು ತಾಲಿಬಾನ್ ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ, ಕಳೆದ ಒಂದು ವಾರದಿಂದ ಅಫ್ಘನ್ ಸೇನೆ ಮತ್ತು ತಾಲಿಬಾನಿಗಳ ನಡುವೆ ತೀವ್ರ ಸಂಘರ್ಷ ನಡೆಯುತ್ತಿದೆ. ಮುಂಬೈ ಮೂಲದ ಡ್ಯಾನಿಷ್ ಸಿದ್ದಕಿ, ಕೆಲವು ದಿನಗಳ ಹಿಂದೆ ಈ ಯುದ್ಧಪೀಡಿತ ಕಂದಹಾರ್ ಪರಿಸ್ಥಿತಿ ಕುರಿತು ವರದಿ ಮಾಡಲು ತೆರಳಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ