ಪೆಗಾಸಸ್ :2ವರ್ಷಗಳ ಬಳಿಕ ಈಗ ಎತ್ತಿರುವುದೇಕೆ ?ಸುಪ್ರೀಂ ಪ್ರಶ್ನೆ

ಹೊಸದಿಲ್ಲಿ : ಪೆಗಾಸಸ್ ವಿವಾದಕ್ಕೆ ಸಂಬಂಸಿ ಮಾಧ್ಯಮಗಳಲ್ಲಿ ಬಂದಿರುವ ಆರೋಪಗಳು ನಿಜವೇ ಆಗಿದ್ದರೆ ಅದು ಗಂಭೀರವಾದದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಆದರೆ ಎರಡು ವರ್ಷಗಳ ಹಿಂದೆಯೇ ಪೆಗಾಸಸ್ ಪ್ರಕರಣ ಹೊರಬಂದಿದ್ದರೂ ಈಗೇಕೆ ಏಕಾಏಕಿ ಅದನ್ನು ಎತ್ತಲಾಗಿದೆ ಎಂಬುದಾಗಿ ಅದು ಪ್ರಶ್ನಿಸಿದೆ.

ಪೆಗಾಸಸ್ ಸ್ಪೈವೇರ್ ಪ್ರಕರಣದ ಕುರಿತು ವಿಶೇಷ ತನಿಖೆ ನಡೆಸುವಂತೆ ಕೋರಿ ಎಡಿಟರ್ಸ್ ಗಿಲ್ಡ್ ಸಹಿತ ಹಲವರು ಸಲ್ಲಿಸಿರುವ ಅರ್ಜಿಗಳ ಮೇಲೆ ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್ .ವಿ .ರಮಣ ನೇತೃತ್ವದ ನ್ಯಾ.ಸೂರ್ಯ ಕಾಂತ್ ಒಳಗೊಂಡ ದ್ವಿಸದಸ್ಯ ಪೀಠವು ,ಎಲ್ಲಾ ಅರ್ಜಿದಾರರು ತಮ್ಮ ಅರ್ಜಿಯ ಪ್ರತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿತು.ಸುಪ್ರೀಂಕೋರ್ಟ್ ವಿಚಾರಣೆಗೆ ಕೇಂದ್ರವು ಹಾಜರಾಗಬೇಕು. ಸತ್ಯ ಹೊರಬರಬೇಕು. ಯಾರ ಹೆಸರುಗಳಿವೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿತು.ಮಂಗಳವಾರ ಮತ್ತೊಮ್ಮೆ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

2019ರಲ್ಲೇ ಬೆಳಕಿಗೆ ಬಂದ ಪ್ರಕರಣ ಇದಾಗಿದ್ದು, ಈ ವಿಷಯನ್ನು ಈಗ ಎರಡು ವರ್ಷಗಳ ಬಳಿಕ ಇದಕ್ಕಿದ್ದಂತೆ ಈ ವಿಚಾರ ಎತ್ತಿದ್ದೇಕೆ? ಯಾರೊಬ್ಬರೂ ಪ್ರಕರಣವನ್ನು ಪರಿಶೀಲಿಸಲು ಯಾವುದೇ ಪ್ರಯತ್ನವನ್ನು ಮಾಡದಿರುವುದು ಆಶ್ಚರ್ಯಕರವಾಗಿದೆ. ಹೆಚ್ಚಿನ ಅರ್ಜಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳ ಪತ್ರಿಕೆ ತುಣುಕುಗಳನ್ನು ಆಧರಿಸಿವೆ ಎಂದು ಪೀಠ ಬೊಟ್ಟು ಮಾಡಿತು.

ಈ ಬಗ್ಗೆ ಸಮಜಾಯಿಷಿ ನೀಡಲೆತ್ನಿಸಿದ ಅರ್ಜಿದಾರರ ಪರ ವಕೀಲ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು, ನಾವು ವಾಷಿಂಗ್ಟನ್ ಪೋಸ್ಟ್ ವರದಿ ಹಾಗೂ ಇತರ ಮಾಧ್ಯಮ ಸಂಸ್ಥೆಗಳಿಂದ ಇದನ್ನು ತಿಳಿದುಕೊಂಡೆವು. ಮಾಜಿ ಸುಪ್ರೀಂಕೋರ್ಟ್ ನ್ಯಾಯಾೀಶರು ಹಾಗೂ ಸುಪ್ರೀಂಕೋರ್ಟ್ ನ ರಿಜಿಸ್ಟ್ರಾರ್‍ಗಳ ಪೋನ್‍ಗಳನ್ನು ಸ್ಪೈವೇರ್ ಬಳಸಿ ತಡೆಹಿಡಿಯಲಾಗಿದೆ ಎಂದು ಇಂದು ಬೆಳಿಗ್ಗೆ ನಮಗೆ ತಿಳಿಸಲಾಯಿತು ಎಂದರು.

ಸಂಸತ್ತಿನ ಮುಂಗಾರು ಅವೇಶನದ ಮುನ್ನಾದಿನ ಕೆಲವು ಮಾಧ್ಯಮ ಕೂಟ ಪೆಗಾಸಸ್ ಕುರಿತಂತೆ ವರದಿ ಪ್ರಕಟಿಸಿದ ಬಳಿಕ ಸಂಸತ್ ಅವೇಶನದಲ್ಲಿ ವಿಪಕ್ಷಗಳು ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವುದಿಲ್ಲಿ ಉಲ್ಲೇಖನೀಯ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ