ಬೊಮ್ಮಾಯಿ ಅವರ ಸರ್ಕಾರ, ದವಳಗಿರಿ ಸರ್ಕಾರ, ಕರ್ನಾಟಕದ ಮಟ್ಟಿಗೆ ಯಡಿಯೂರಪ್ಪ ಅವರೆ ಹೈಕಮಾಂಡ್ : ಕಾಂಗ್ರೆಸ್

ಬೆಂಗಳೂರು, ಅ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ಹೆಸರಿರುವ ದವಳಗಿರಿ ಸರ್ಕಾರ ಎಂದು ಕರೆದಿರುವ ಕಾಂಗ್ರೆಸ್, ಕರ್ನಾಟಕದ ಮಟ್ಟಿಗೆ ಯಡಿಯೂರಪ್ಪ ಅವರೆ ಹೈಕಮಾಂಡ್ ಎಂದಿದೆ.

ಟ್ವಿಟ್ ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ತಕ್ಕ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ, ತಮ್ಮ ವಿರುದ್ಧದ ಬಂಡಾಯ ಸಾರಿದ್ದವರನ್ನು ಸಂಪುಟದಿಂದ ದೂರವಿಡುವ ಮೂಲಕ ಮೀರ್‍ಸಾದಿಕ್ ನಳೀನ್ ಕುಮಾರ್ ಕಟೀಲ್ ತಂಡಕ್ಕೆ ಮರ್ಮಾಘಾತ ನೀಡಿದ್ದಾರೆ. ಕಟೀಲ್ ಕಾಮಿಡಿ ಮಾಡಲು ಮಾತ್ರ ಇರುವುದು ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ವ್ಯಂಗ್ಯವಾಡಿದೆ.

ಸಿಎಂ ಆಯ್ಕೆಯಿಂದ ಸಚಿವರ ಆಯ್ಕೆವರೆಗೂ ಯಡಿಯೂರಪ್ಪ ಅವರೇ ಹೈಕಮಾಂಡ್ ಆಗಿದ್ದು, ಇದು ದವಳಗಿರಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಮೊದಲೆಲ್ಲ ಕಾಂಗ್ರೆಸ್‍ಗೆ ಹೈಕಮಾಂಡ್ ಸಂಸ್ಕøತಿ ಎಂದು ಹೇಳುತ್ತಿದ್ದ ಬಿಜೆಪಿ ಈಗ ತಮ್ಮದೇ ಬಲಿಷ್ಠ ಹೈಕಮಾಂಡ್ ಎಂದು ಬಿಂಬಿಸಿಕೊಳ್ಳುತ್ತಾ ತಮ್ಮ ದ್ವಿಮುಖ ನೀತಿ ಅನುಸರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಯಡಿಯೂರಪ್ಪ ಅವರನ್ನು ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದ ಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ ಎಂದು ಪ್ರಶ್ನಿಸಿದೆ.

ದವಳಗಿರಿ ಸರ್ಕಾರದ ಸಂಪುಟದಲ್ಲಿ ದಲಿತರನ್ನು ಕಡೆಗಣಿಸಿ ಬಿಜೆಪಿ ತನ್ನ ದಲಿತ ವಿರೋಧಿ ನೀತಿಯನ್ನು ಮತ್ತೊಮ್ಮೆ ನಿರೂಪಿಸಿದೆ. ದಲಿತರನ್ನು ಮುಖ್ಯಮಂತ್ರಿ ಮಾಡುವುದಿರಲಿ ಕೊನೆ ಪಕ್ಷ ಸಂಪುಟದಲ್ಲಿಯೂ ಪ್ರಾತಿನಿಧ್ಯ ನೀಡದ ಬಿಜೆಪಿ, ಇತರ ಪಕ್ಷಗಳ ವಿರುದ್ಧ ಅರೋಪ ಮಾಡುವುದು ಹಾಸ್ಯಾಸ್ಪದ. ಬಿಜೆಪಿಯಲ್ಲಿ ದಲಿತ, ಹಿಂದುಳಿದವರಿಗೆ ಕೊನೆ ಸಾಲಿನ ಕುರ್ಚಿ ಮಾತ್ರ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ


Fatal error: Allowed memory size of 268435456 bytes exhausted (tried to allocate 20480 bytes) in /home/deploy/projects/kannada.vartamitra.com/wp-includes/wp-db.php on line 1889

Fatal error: Allowed memory size of 268435456 bytes exhausted (tried to allocate 20480 bytes) in /home/deploy/projects/kannada.vartamitra.com/wp-includes/plugin.php on line 449